ಶ್ರೀ ಭುವನೇಂದ್ರ ರೆಸಿಡೆನ್ಸಿಯಲ್ ನ 9ನೇ ತರಗತಿಯ ಸ್ನಿಗ್ಧ

ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ ಮತ್ತು ಕೇಂದ್ರ ರಕ್ಷಣಾ ಸಚಿವಾಲಯದ ಸಹಯೋಗದೊಂದಿಗೆ ಶಿಕ್ಷಣ ಸಚಿವಾಲಯದ ಶೌರ್ಯ ಪ್ರಶಸ್ತಿ ಉಪಕ್ರಮದ ಭಾಗವಾಗಿ ವೀರ್ ಗಾಥ 4 .0 ಸ್ಪರ್ಧೆಯ ಬುಡಕಟ್ಟು ಜನಾಂಗದ ಸ್ವಾತಂತ್ರ್ಯ ಹೋರಾಟ’ ಕುರಿತ ಕನ್ನಡ ಕವನ ಸ್ಪರ್ಧೆಯಲ್ಲಿ ವಿಜೇತರಾದ ಶ್ರೀ ಭುವನೇಂದ್ರ ರೆಸಿಡೆನ್ಸಿಯಲ್ ಸ್ಕೂಲ್ ಕಾರ್ಕಳ ಇಲ್ಲಿನ 9ನೆಯ ತರಗತಿಯ ವಿದ್ಯಾರ್ಥಿನಿ ಕುಮಾರಿ ಸ್ನಿಗ್ಧ ಇವರು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೇಂದ್ರ ರಕ್ಷಣಾ ಸಚಿವರಿಂದ ಗೌರವವನ್ನು ಸ್ವೀಕರಿಸಲಿದ್ದಾರೆ.”
ರಾಷ್ಟ್ರ ಮಟ್ಟದಲ್ಲಿ ವಿವಿಧ ಸ್ಪರ್ಧೆಯಲ್ಲಿ, ವಿಜೇತರಾದ 100 ಮಂದಿ ವಿಜೇತರ ಪಟ್ಟಿಯಲ್ಲಿ ಕಾರ್ಕಳ ತಾಲೂಕಿನಿಂದ ಆಯ್ಕೆಯ ಏಕೈಕ ವಿದ್ಯಾರ್ಥಿನಿಯಾಗಿದ್ದಾರೆ. ಇವರು ಸ್ವಾಂತಂತ್ರ್ಯ ಹೋರಾಟದಲ್ಲಿ ಬುಡಕಟ್ಟು ಜನಾಂಗದ ಪಾತ್ರದ ಕವನವನ್ನು ಬರೆದು ರಾಜ್ಯದಿಂದ ಆಯ್ಕೆಯಾದ ಇಬ್ಬರು ವಿದ್ಯಾರ್ಥಿನಿಯರಲ್ಲಿ ಒಬ್ಬರಾಗಿದ್ದಾರೆ.
ಇವರ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.





















