
ಬೆಳಗಾವಿ: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್(40) ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಬುಧವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ರೈತ ಪರ ಹೋರಾಟ ಮಾಡುತ್ತಾ ಸಂಘಟನೆ ಮಾಡಿದ್ದ ಜಯಶ್ರೀ ಅವರು ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸಿದ್ದರು. ಕಬ್ಬಿನ ಬಾಕಿ ಬಿಲ್ ಗಾಗಿ ಸುವರ್ಣ ಸೌಧಕ್ಕೆ ಕಬ್ಬು ತುಂಬಿದ ಲಾರಿ ತೆಗೆದುಕೊಂಡು ಹೋಗಿ ಪ್ರತಿಭಟನೆ ನಡೆಸುವ ಮೂಲಕ ಎಲ್ಲರ ಗಮನಸೆಳೆದಿದ್ದರು. ಇದೀಗ ಅನಾರೋಗ್ಯದಿಂದ ನಿಧನರಾಗಿ ಓರ್ವ ಮಗನನ್ನು ಅಗಲಿದ್ದಾರೆ.