
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ ಲೋಕಸಭಾ ಚುನಾವಣಾ ಪ್ರಕ್ರಿಯೆ ಮುಗಿದ ಕೂಡಲೇ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಬಿಬಿಎಂಪಿ ಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬಿಬಿಎಂಪಿಗೆ ಚುನಾವಣೆ ನಡೆಸಲು ನಾವು ತಯಾರಿದ್ದೇವೆ. ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಮುಗಿದ ಕೂಡಲೇ ಚುನಾವಣೆ ನಡೆಸುತ್ತೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಮೊದಲು ಕ್ಷೇತ್ರ ಪುನರ್ ವಿಂಗಡಣೆ ಆಗುತ್ತೆ. ನಂತರ ಮೀಸಲಾತಿ ಪ್ರಕಟಿಸುತ್ತೇವೆ ಎಂದು ಮಾಹಿತಿ ನೀಡಿದರು.