
ಬೆಂಗಳೂರು: ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಇವರನ್ನು ಇಡೀ ವಶಕ್ಕೆ ಪಡೆದುಕೊಂಡಿದ್ದು, ಇದೀಗ ಇವರ ಕುಟುಂಬದ ಹತ್ತಕ್ಕೂ ಹೆಚ್ಚು ಬ್ಯಾಂಕ್ ಪಾಸ್ ಬುಕ್ ಅನ್ನು ಸೀಜ್ ಮಾಡಲಾಗಿದೆ ಎನ್ನಲಾಗುತ್ತಿದೆ.
ಮಾಜಿ ಸಚಿವ ಬಿ ನಾಗೇಂದ್ರ ಇವರ ಕುಟುಂಬಸ್ಥರ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗಳ ಮತ್ತು ಹಣ ವರ್ಗಾವಣೆಯ ವಿವರಗಳ ಬಗ್ಗೆ ಇಡೀ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ನಿವಾಸದ ಮೇಲೆ ಇಡಿ ದಾಳಿ ನಡೆಸಿದ್ದು, ಸುಮಾರು 38 ಗಂಟೆಗಳ ಕಾಲ ಪರಿಶೀಲನೆ ದಾಖಲೆಗಳ ಪರಿಶೀಲನೆ ನಡೆಸಿ ಬಳಿಕ ಶುಕ್ರವಾರದಂದು ಬೆಳಿಗ್ಗೆ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ ನಾಗೇಂದ್ರ ಇವರನ್ನು ವಶಕ್ಕೆ ಪಡೆದುಕೊಂಡಿದ್ದರು.





