ಶಾಸಕ ವಿ ಸುನಿಲ್ ಕುಮಾರ್, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ
ಅಂಬೇಡ್ಕರ್ ಕೇವಲ ಒಂದು ಸಮುದಾಯದ ನಾಯಕರಲ್ಲ, ಇಡೀ ರಾಷ್ಟ್ರದ ಆಸ್ತಿ: ರವೀಂದ್ರ ಮೊಯ್ಲಿ

ಕಾರ್ಕಳ : ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಕಾರ್ಕಳ ಶಾಸಕರ ಜನಸೇವಾ ಕಛೇರಿಯಲ್ಲಿ ಇಂದು ಅತ್ಯಂತ ಶ್ರದ್ಧಾಭಕ್ತಿ ಗೌರವಗಳೊಂದಿಗೆ ಆಚರಿಸಲಾಯಿತು. ಕಾರ್ಕಳ ಶಾಸಕರು ಮಾಜಿ ಸಚಿವರಾದ ಶ್ರೀ ವಿ ಸುನಿಲ್ ಕುಮಾರ್ ರವರು ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಜೊತೆಗೆ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿಯ ಶುಭಾಶಯ ವ್ಯಕ್ತಪಡಿಸಿದರು.

ಪಕ್ಷದ ವಕ್ತಾರರು, ನ್ಯಾಯವಾದಿಗಳಾದ ಶ್ರೀ ರವಿಂದ್ರ ಮೊಯ್ಲಿ ಯವರು ಅಂಬೇಡ್ಕರ್ ಅವರ ಕುರಿತು ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ. ಮಾತ್ರವಲ್ಲದೆ “ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯದ ನಾಯಕರಲ್ಲ, ಅವರು ಇಡೀ ರಾಷ್ಟ್ರದ ಆಸ್ತಿ. ಸಮಾನತೆ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ಕುರಿತಾದ ಅವರ ಆಶಯಗಳು ಇಂದಿಗೂ ಪ್ರಸ್ತುತವಾಗಿವೆ” ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್, ನಗರ ಅಧ್ಯಕ್ಷರಾದ ನಿರಂಜನ್ ಜೈನ್, ಮಾಜಿ ಪುರಸಭಾ ಅಧ್ಯಕ್ಷರಾದ ಸುಮಾ ಕೇಶವ್ ಪುರಸಭಾ ಸದಸ್ಯರು, ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಶ್ರೀನಿವಾಸ್ ಕಾರ್ಲ, ವಿವಿಧ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು ಹಾಗೂ, ಪದಾಧಿಕಾರಿಗಳು, ಮುಂತಾದವರು ಉಪಸ್ಥಿತರಿದ್ದರು.











