
ಹೊಸದಿಲ್ಲಿ: ಕುಸ್ತಿಪಟು ವಿನೇಶ್ ಫೋಗಾಟ್ ಅವರು ಇದೀಗ ರಾಜಕೀಯದಲ್ಲಿ ತನ್ನ ಪಟ್ಟು ಪ್ರದರ್ಶನಕ್ಕೆ ಅಣಿಯಾಗಿದ್ದು ಮತ್ತೋರ್ವ ಕುಸ್ತಿಪಟು ಬಜರಂಗ್ ಪೂನಿಯಾ ಜತೆಗೆ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಸೆ.4 ರಂದು ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ಇಂದು ಮಧ್ಯಾಹ್ನ ಇಬ್ಬರು ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ.
ವಿನೇಶ್ ಫೋಗಟ್ ಅವರು ಕೆಲ ದಿನಗಳ ಹಿಂದಷ್ಟೇ ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡು ತನ್ನ ಬೆಂಬಲವನ್ನು ಸೂಚಿಸಿದ್ದರು.













