
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಭೇಟಿ, ಸಂಪುಟ ವಿಸ್ತರಣೆ ಸಂಬಂಧ ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯನವರು ಇಂದು ಮುಂಜಾನೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿ ವಿಮಾನ ನಿಲ್ದಾಣದಿಂದ ನೇರವಾಗಿ ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಪಾರ್ವತಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ಅರ್ಧಗಂಟೆಗೂ ಹೆಚ್ಚು ಕಾಲ ವೈದ್ಯರ ಜೊತೆ ಪತ್ನಿ ಆರೋಗ್ಯದ ಕುರಿತು ಸಮಲೋಚನೆ ನಡೆಸಿದ ಸಿಎಂ ಬಳಿಕ ಮಾತನಾಡಿದ ಆರೋಗ್ಯ ಸ್ಥಿರವಾಗಿದ್ದು ಏನು ಸಮಸ್ಯೆ ಇಲ್ಲ. ಶ್ವಾಸಕೋಶ ಸೋಂಕು ಇದೆ, ಈಗ ಸುಧಾರಣೆ ಕಾಣುತ್ತಿದೆ. ಇನ್ನೂ 2-3 ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.






