
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್ಸಿಪಿ ನಾಯಕ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನಗೊಂಡಿದ್ದು ಈ ದುರ್ಘಟನೆಯಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಇಂದು ಬೆಳಗ್ಗೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡಿಂಗ್ ವೇಳೆ ಈ ದುರಂತ ಸಂಭವಿಸಿದ್ದು ವಿಮಾನದಲ್ಲಿ ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ 6 ಮಂದಿ ಕೂಡ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.
ಅಜಿತ್ ಪವಾರ್ ಜಿಲ್ಲಾ ಪರಿಷತ್ ಚುನಾವಣೆಯ ಪ್ರಚಾರಕ್ಕಾಗಿ ಹಲವು ಸಭೆಗಳಲ್ಲಿ ಭಾಗವಹಿಸಲು ಮುಂಬೈಯಿಂದ ಬಾರಾಮತಿಗೆ ತೆರಳಿದ್ದು ಲ್ಯಾಂಡಿಂಗ್ ಸಮಯದಲ್ಲಿ ವಿಮಾನವು ರನ್ವೇಯಿಂದ ಹೊರಗೆ ಹೋಗಿ ಅಪಘಾತಕ್ಕೀಡಾಗಿದೆ ಎಂದು ತಿಳಿದು ಬಂದಿದೆ.



















