
ಅಜೆಕಾರು: ಜೂನ್ 6ರಂದು ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಮರ್ಣೆಯಲ್ಲಿ ನಾಯಿಗೆ ವಿಷ ಹಾಕಿ ಕೊಂದಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆಟಾ ಸಂಸ್ಥೆಯು ಆರೋಪಿಗಳ ಮಾಹಿತಿ ನೀಡಿದವರಿಗೆ 50,000 ಬಹುಮಾನ ಘೋಷಿಸಿದೆ.
ವಿಷ್ಣುಮೂರ್ತಿ ದೇವಸ್ಥಾನದ ಪರಿಸರದಲ್ಲಿ ನಾಯಿಯೊಂದು ಮೃತಪಟ್ಟ ಸ್ಥಿತಿಯಲ್ಲಿದ್ದು ಮರಣೋತ್ತರ ಪರೀಕ್ಷೆಯಲ್ಲಿ ನಾಯಿಗೆ ವಿಷ ಹಾಕಿರುವುದು ಖಚಿತವಾಗಿದೆ. ತನಿಖೆ ಮುಂದುವರಿಸಿದ ಪೊಲೀಸರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದು ಪೆಟಾ ಸಂಸ್ಥೆಯು ನಾಯಿಗೆ ವಿಷ ಉಣಿಸಿದ ಆರೋಪಿಗಳ ಮಾಹಿತಿ ನೀಡಿದಲ್ಲಿ ಐವತ್ತು ಸಾವಿರ ರೂ ಬಹುಮಾನ ನೀಡುವುದಾಗಿ ಘೋಷಿಸಿದ್ದು ಅಲ್ಲದೆ ಈ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ.



















