
ಬೆಂಗಳೂರು: ಮಾರ್ಚ್ 11ರಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದರು.
ಇದೀಗ ವೈದ್ಯರ ಜೊತೆ ಆರೋಗ್ಯ ಸಚಿವರು ಸಭೆ ನಡೆಸಿದ್ದು, ಸರಕಾರದ ಮಧ್ಯ ಪ್ರವೇಶದಿಂದಾಗಿ ಮುಷ್ಕರ ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಇಬ್ಬರು ಸಚಿವರು ನೀಡಿದ ಲಿಖಿತ ಭರವಸೆಯ ಹಿನ್ನೆಲೆ ಮುಷ್ಕರ ಹಿಂಪಡೆಯಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಮಾತನಾಡಿದ್ದಾರೆ.


ಮುಷ್ಕರ ವಾಪಸ್ ಪಡೆದಿರುವುದರಿಂದ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳ ಒಪಿಡಿ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ.







