27.2 C
Udupi
Wednesday, May 27, 2026
spot_img
spot_img
HomeBlogಶಾಲೆ ಆರಂಭಕ್ಕೆ ಕೌಂಟ್‌ಡೌನ್: ಶಿಕ್ಷಣ ಇಲಾಖೆಯಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಶಾಲೆ ಆರಂಭಕ್ಕೆ ಕೌಂಟ್‌ಡೌನ್: ಶಿಕ್ಷಣ ಇಲಾಖೆಯಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಬೇಸಿಗೆ ರಜೆ ಅಂತ್ಯಗೊಳ್ಳಲಿದ್ದು, ಜೂನ್ 1ರಿಂದ ರಾಜ್ಯದಾದ್ಯಂತ ಶಾಲೆಗಳು ಪುನರಾರಂಭವಾಗಲಿವೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಶಾಲಾ ಕಟ್ಟಡಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳು, ಶೌಚಾಲಯಗಳು ಹಾಗೂ ಅಡುಗೆ ಕೋಣೆಗಳನ್ನು ತಕ್ಷಣ ದುರಸ್ತಿ ಅಥವಾ ತೆರವುಗೊಳಿಸುವಂತೆ ಸೂಚಿಸಲಾಗಿದೆ. ಮಳೆಗಾಲಕ್ಕೂ ಮುನ್ನ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ.

6ರಿಂದ 14 ವರ್ಷದ ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ. ಇಲಾಖೆಯ ಅನುಮತಿ ಪಡೆದ ಶಾಲೆಗಳಲ್ಲಿ ಉರ್ದು-ಇಂಗ್ಲಿಷ್ ಸೇರಿದಂತೆ ದ್ವಿಭಾಷಾ ಬೋಧನಾ ಪದ್ಧತಿ ಜಾರಿಗೆ ತರಲಾಗುತ್ತದೆ.

ಮೇ 28ರೊಳಗೆ ಶಾಲೆಗಳ ಸ್ವಚ್ಛತೆ, ಕುಡಿಯುವ ನೀರು ಹಾಗೂ ಸುರಕ್ಷತಾ ಪರಿಶೀಲನೆ ಪೂರ್ಣಗೊಳಿಸಬೇಕು. ಮೇ 29ರಂದು ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು ಶಾಲೆಗೆ ಹಾಜರಾಗಿ ಪೂರ್ವಸಿದ್ಧತೆ ನಡೆಸಬೇಕಿದೆ.

ಜೂನ್ 1ರಂದು ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಅಭಿಯಾನ ಆರಂಭವಾಗಲಿದ್ದು, ಜೂನ್ 30ಕ್ಕೆ ದಾಖಲಾತಿ ಆಂದೋಲನ ಮುಕ್ತಾಯಗೊಳ್ಳಲಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಡಿಜಿಟಲ್ ಹಾಜರಾತಿ ಕಡ್ಡಾಯಗೊಳಿಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page