ಜನಪ್ರತಿನಿಧಿಗಳ ಕರೆಗೆ ಸ್ಪಂದಿಸಿ, ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಸೂಚನೆ

ಬೆಂಗಳೂರು: ಜನಪ್ರತಿನಿಧಿಗಳಾದ ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರ ದೂರವಾಣಿಯನ್ನು ಕಡ್ಡಾಯವಾಗಿ ಇಟ್ಟುಕೊಳ್ಳಬೇಕು ಹಾಗೂ ಜನಪ್ರತಿನಿಧಿಗಳು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸುವಂತೆ ಪೊಲೀಸ್ ಅಧಿಕಾರಿಗಳಿಗೆ , ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.ಎ ಸಲೀಂ ಸೂಚನೆ ನೀಡಿದ್ದಾರೆ.
ಪೊಲೀಸ್ ಅಧಿಕಾರಿಗಳು ತಮ್ಮ ಕರೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕೆಲ ಶಾಸಕರು ಹಾಗೂ ಸಂಸದರು ಆಕ್ಷೇಪ ವ್ಯಕ್ತಪಡಿಸಿದ್ದು, ಇದೀಗ ಈ ವಿಚಾರವಾಗಿ ಕ್ರಮ ಕೈಗೊಳ್ಳಲಾಗಿದೆ.
ಒಂದು ವೇಳೆ ಜನಪ್ರತಿನಿಧಿಗಳು ಕರೆ ಮಾಡಿದಾಗ, ಅನ್ಯ ಕರ್ತವ್ಯದಲ್ಲಿ ನಿರತರಾಗಿದ್ದಲ್ಲಿ ಕರ್ತವ್ಯ ಮುಗಿದ ನಂತರ ಕರೆಗೆ ಸ್ಪಂದಿಸುವಂತೆ ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದೆ.






