28.2 C
Udupi
Thursday, April 30, 2026
spot_img
spot_img
HomeBlogಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಕಾರ್ಕಳ ತಾಲೂಕು...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಕಾರ್ಕಳ ತಾಲೂಕು ವತಿಯಿಂದ ವಾತ್ಸಲ್ಯ ಮನೆಯ ಹಸ್ತಾಂತರ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಕಾರ್ಕಳ ತಾಲೂಕಿನ ಲ್ಲಿ ವಾತ್ಸಲ್ಯ ಕಾರ್ಯಕ್ರಮ ದಡಿಯಲ್ಲಿ ವಾತ್ಸಲ್ಯ ಮನೆ ಯ ಹಸ್ತಾಂತರ ಕಾರ್ಯಕ್ರಮ ವನ್ನು ಇಂದು ನಡೆಸಲಾಯ್ತು. ವಾತ್ಸಲ್ಯ ಕಾರ್ಯಕ್ರಮದ ಉದ್ಘಾಟನೆ ಹಾಗೂ ಹಸ್ತಾಂತರ ಕಾರ್ಯಕ್ರಮ ವನ್ನು ಯೋಜನೆ ಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಕಮಲಾಕ್ಷಿರವರು ಹಸ್ತಾಂತರಿಸಿದರು. ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿ ಗಳಾಗಿ ಉಡುಪಿ ಜಿಲ್ಲೆಯ ನಿರ್ದೇಶಕರಾದ ನಾಗರಾಜ್ ಶೆಟ್ಟಿ ಮಾತನಾಡಿ ವಾತ್ಸಲ್ಯ ಕಾರ್ಯಕ್ರಮ ದ ಮಹತ್ವ, ಹಾಗೂ ವಾತ್ಸಲ್ಯ ಕಾರ್ಯಕ್ರಮ ದಲ್ಲಿ ಆಗುವ ಕಾರ್ಯಕ್ರಮ ಗಳ ಬಗ್ಗೆ ಸವಿವರವಾಗಿ ಮಾತನಾಡಿದರು, ಹಾಗೂ ವಿಕ್ರಮ್ ಹೆಗ್ಡೆ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷರು ಕಾರ್ಯಕ್ರಮ ಸಹ ಯೋಜನೆಯ ಕಾರ್ಯಕ್ರಮ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕಿನ ಯೋಜನಾಧಿಕಾರಿಗಳಾದ ಹೇಮಲತಾ ,ಹಾಗೂ ವಲಯ ಅಧ್ಯಕ್ಷರಾದ ಮಂಜುನಾಥ್ ಪಂಚಾಯತ ನಿಕಟ ಪೂರ್ವ ಅಧ್ಯಕ್ಷರಾದ ಅದ್ಭುಲು ಸಲಾಂ ಉಪಾಧ್ಯಕ್ಷರಾದ ವಿದ್ಯಾ , ಪಂಚಾಯತ್ ಸದಸ್ಯರು, ಒಕ್ಕೂಟ ದ ಅಧ್ಯಕ್ಷರು, ಪದಾಧಿಕಾರಿಗಳು, ತಾಲ್ಲೂಕು ಜ್ಞಾನ ವಿಕಾಸ ಸಮನ್ವಯಧಿಕಾರಿ, ವಲಯದ ಮೇಲ್ವಿಚಾರಕರು, ಸೇವಾಪ್ರತಿನಿಧಿ ಗಳು ವಾತ್ಸಲ್ಯ ಸದಸ್ಯರಾದ ಗಿರಿಜಾ ರವರು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page