
ಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಸ್ಕೂಲ್ ನಲ್ಲಿ ಸಾಮಾಜಿಕ ಮಾಧ್ಯಮ ಸುರಕ್ಷತೆ ಮತ್ತು ಯೋಗಕ್ಷೇಮದ ಕುರಿತು ಒಂದು ದಿನದ ಕಾರ್ಯಗಾರ ಆಯೋಜಿಸಲಾಯಿತು.

ಸಮಗ್ರ ಶಿಕ್ಷಣದಲ್ಲಿ 25 ವರ್ಷಗಳ ಶ್ರೇಷ್ಠತೆಯನ್ನು ಗುರುತಿಸುವ ಬೆಳ್ಳಿ ಮಹೋತ್ಸವ ಆಚರಣೆಯ ಭಾಗವಾಗಿ ಈ ಕಾರ್ಯಕ್ರಮವನ್ನು ನಡೆಸಲಾಯಿತು. ಆಧುನಿಕ ಯುಗದಲ್ಲಿ ಸಾಮಾಜಿಕ ಮಾಧ್ಯಮಗಳು ಅಪಾರ ಅವಕಾಶಗಳನ್ನು ನೀಡುತ್ತಿದ್ದರೂ ಅದನ್ನು ಬುದ್ಧಿವಂತಿಕೆಯಿಂದ ಹಾಗೂ ಜವಾಬ್ದಾರಿಯಿಂದ ಬಳಸುವುದರ ಪ್ರಾಮುಖ್ಯತೆಯನ್ನು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತಹ ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಹಾಗೂ ಶ್ರೀ ಭುವನೇಂದ್ರ ಕಾಲೇಜು ಟ್ರಸ್ಟ್ ಇದರ ಕಾರ್ಯದರ್ಶಿ ಡಾ. ಮಂಜುನಾಥ್. ಎ. ಕೋಟ್ಯಾನ್ ತಿಳಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದಂತಹ ವಿಶಾಲ್ ಇವರು ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸಾಮಾಜಿಕ ಮಾಧ್ಯಮವನ್ನು ಜವಾಬ್ದಾರಿಯುತವಾಗಿ ಹೇಗೆ ಬಳಸಬೇಕು ಸೈಬರ್ ಸುರಕ್ಷತೆ, ಜವಾಬ್ದಾರಿಯುತ ಡಿಜಿಟಲ್ ನಡವಳಿಕೆ, ಮತ್ತು ಮಾನಸಿಕ ಆರೋಗ್ಯ ಜಾಗೃತಿಯಂತಹ ವಿವಿಧ ಅಂಶಗಳೊಂದಿಗೆ ವಿವರವಾಗಿ ತಿಳಿಸಿದರು. ಪ್ರಾಂಶುಪಾಲರಾದ ಪ್ರಮೀಳಾ ಕೋಟ್ಯಾನ್ ಸ್ವಾಗತಿಸಿದರು, ಇಂಗ್ಲಿಷ್ ಶಿಕ್ಷಕಿ ಗೀತಾ ಶೆಟ್ಟಿಗಾರ್, ನಿರೂಪಿಸಿ, ವಂದಿಸಿದರು.






















































































