
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಪ್ರೌಢಶಾಲಾ ಮಕ್ಕಳಿಗೆ ಶಿಕ್ಷಣದಲ್ಲಿ ಅತ್ಯುತ್ತಮ ಫ್ಲಾಟ್ ಫಾರಂ ಒದಗಿಸುವ ಉದ್ದೇಶದಿಂದ ಫೌಂಡೇಶನ್ ಕೋರ್ಸುಗಳ ಕುರಿತು ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕಾರ್ಯಗಾರವನ್ನು ಏರ್ಪಡಿಸಲಾಯಿತು.
ವಿದ್ಯಾರ್ಥಿಗಳ ಮೂಲಭೂತ ಪರಿಕಲ್ಪನೆಗಳನ್ನು ಬಲಪಡಿಸುವುದು ಹಾಗೂ ಅವರನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಗೊಳಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಇದು ಜೆಇಇ, ನೀಟ್, ಎನ್ಎಟಿ, ಸಿ ಎಡಿ, ಯುಪಿಎಸ್ಸಿ, ಸಿಎ ಮತ್ತು ಇತರ ವೃತ್ತಿಪರ ಕೋರ್ಸ್ ಗಳಿಗೆ ಸೇರಲು ಬಯಸುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡುವುದರ ಜೊತೆಗೆ ಉನ್ನತ ವ್ಯಾಸಂಗಕ್ಕೆ ಸಹ ಪ್ರೋತ್ಸಾಹಿಸುತ್ತದೆ. ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್.ಕಾಮತ್,ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.





















