
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ದಿನಾಂಕ 14/03/2026 ರಂದು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಭಾವನಾತ್ಮಕವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲೆಯ ಅಧ್ಯಕ್ಷರಾದ ಶ್ರೀಯುತ ಡಾ.ಪ್ರಶಾಂತ ಹೆಗ್ಡೆ ಹಾಗೂ ಮುಖ್ಯೋಪಾಧ್ಯಾಯರು ಉದ್ಘಾಟಿಸಿದರು.
ಕಾರ್ಯಕ್ರಮದ ಆರಂಭದಲ್ಲಿ 9ನೇ ತರಗತಿ ವಿದ್ಯಾರ್ಥಿಗಳು ಆತ್ಮೀಯವಾಗಿ ಸ್ವಾಗತಿಸಿದರು. ನಂತರ ವಿದ್ಯಾರ್ಥಿಗಳು ಹಾಡು, ನೃತ್ಯಗಳಿಂದ ಎಲ್ಲರ ಮನರಂಜಿಸಿದರು. ವಿವಿಧ ವಿನೋದಾವಳಿ ಆಟಗಳ ಸ್ಪರ್ಧೆಗಳನ್ನು ಮಕ್ಕಳಿಗಾಗಿ ಏರ್ಪಡಿಸಲಾಗಿತ್ತು.ಶಾಲಾ
ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್.ಕಾಮತ್ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯಕ್ಕಾಗಿ ಶುಭಾಶಯಗಳನ್ನು ತಿಳಿಸಿ, ಪರಿಶ್ರಮ ಮತ್ತು ಶಿಸ್ತಿನಿಂದ ಮುಂದುವರಿಯಲು ಸಲಹೆ ನೀಡಿದರು. ಕಾರ್ಯಕ್ರಮವು ಸಂತೋಷ ಹಾಗೂ ಭಾವನಾತ್ಮಕ ಕ್ಷಣಗಳೊಂದಿಗೆ ಯಶಸ್ವಿಯಾಗಿ ನೆರವೇರಿತು.
ಈ ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷರಾದ ಶ್ರೀಯುತ ಡಾ.ಪ್ರಶಾಂತ್ ಹೆಗ್ಡೆ, ಪ್ರಾಂಶುಪಾಲರು,ಶಿಕ್ಷಕ-
ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ತಿತರಿದ್ದರು.







