
ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟವು ಸಂಕ್ರಾಂತಿ ಹಬ್ಬದ ಬಳಿಕ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಲು ನಿರ್ಧರಿಸಿದ್ದು ಪ್ರತಿ ಲೀಟರ್ ಹಾಲಿನ ದರದಲ್ಲಿ 5 ರೂ. ಏರಿಕೆ ಮಾಡುವಂತೆ ಬುಧವಾರ ನಡೆದ ಹಾಲು ಒಕ್ಕೂಟ ಸಭೆಯಲ್ಲಿ ಪ್ರಸ್ತಾಪವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ.
ಬೆಂಗಳೂರಿನ ಡೈರಿ ಸರ್ಕಲ್ ಬಳಿಯ ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಲೆ ಏರಿಕೆ ಬಗ್ಗೆ ಪ್ರಸ್ತಾವನೆ ಬಂದಿದ್ದು ಈ ಬಗ್ಗೆ ಪರಿಶೀಲಿಸುತ್ತೇವೆ. ದರ ಏರಿಕೆ ದುಡ್ಡು ರೈತರ ಕೈ ಸೇರುತ್ತೆ ಎಂದು ಹೇಳಿದರು.
ಪ್ರತಿ ಲೀಟರ್ಗೆ 5 ರೂ. ಹೆಚ್ಚಳ ಮಾಡಲು ಮುಂದಾಗಿರುವುದಕ್ಕೆ ಜನರು ಆಕ್ರೋಶ ಹೊರಹಾಕಿದ್ದು, ದಿಢೀರ್ ಬೆಲೆ ಏರಿಕೆ ಮಾಡುವುದು ಸರಿಯಲ್ಲ. ಹಾಲಿನ ದರ ಹೆಚ್ಚಳಕ್ಕೆ ಯಾವುದೆ ಮಾನದಂಡ ಇಲ್ಲ. ಈ ಬಗ್ಗೆ ತಜ್ಞರ ಸಲಹೆ ಪಡೆದು ಬಳಿಕ ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ಒತ್ತಡ ಹೇರಿದ್ದಾರೆ.




