ಚೆನ್ನೈ: ಸಂಗೀತ ಮಾಂತ್ರಿಕ ಎಆರ್ ರೆಹಮಾನ್ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದ್ದು ಹೀಗಾಗಿ ರೆಹಮಾನ್ ಅವರ ಪತ್ನಿ ಸಾಯಿರಾ ಪತಿಯಿಂದ ಬೇರ್ಪಡುವುದಾಗಿ ಘೋಷಿಸಿದ್ದಾರೆ.
“ಮದುವೆಯಾಗಿ ಹಲವು ವರ್ಷಗಳ ನಂತರ, ಸಾಯಿರಾ ಅವರು ತಮ್ಮ ಪತಿ ಎಆರ್ ರೆಹಮಾನ್‌ನಿಂದ ಬೇರ್ಪಡುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇವರ ಸಂಬಂಧದಲ್ಲಿ ಆಳವಾದ ಭಾವನಾತ್ಮಕ ಒತ್ತಡದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಒಬ್ಬರಿಗೊಬ್ಬರ ನಡುವೆ ಪ್ರೀತಿ ಇದ್ದರೂ, ತಮ್ಮ ನಡುವೆ ಆಗುವ ಮನಸ್ತಾಪಗಳು ಹಾಗೂ ಸಮಸ್ಯೆಗಳು ದೊಡ್ಡ ಅಂತರವನ್ನು ಸೃಷ್ಟಿಸಿದೆ ಎಂಧು ದಂಪತಿಗಳು ಕಂಡುಕೊಂಡಿದ್ದಾರೆ. ಈ ಹಂತದಲ್ಲಿ ಯಾರೂ ಕೂಡ ತಮ್ಮ ನಡುವೆ ಸೇತುವೆಯಾಗಲು ಸಾಧ್ಯವಿಲ್ಲ ಎಂದು ಅವರು ಭಾವಿಸಿದ್ದಾರೆ. ಈ ಕಾರಣದಿಂದಾ ಸಾಯಿರಾ ಅವರು ನೋವು ಹಾಗೂ ಸಂಕಟದಿಂದಲೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ’ ಎಂದು ಸಾಯಿರಾ ಅವರ ವಕೀಲ ವಂದನಾ ಶಾ ದಂಪತಿಗಳು ಬೇರ್ಪಟ್ಟ ನಿರ್ಧಾರದ ಬಗ್ಗೆ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದರು.
ಸಾಯಿರಾ ಅವರ ಈ ಸವಾಲಿನ ಸಮಯದಲ್ಲಿ ಅಭಿಮಾನಿಗಳು ತಮ್ಮ ಪ್ರೈವಸಿಯನ್ನು ಗೌರಿಸವೇಕು ಎಂದು ಬಯಸುತ್ತಾರೆ. ಏಕೆಂದರೆ, ಅವರೀಗ ತಮ್ಮ ಜೀವನದ ಅತ್ಯಂತ ಕಷ್ಟಕರ ಅಧ್ಯಾಯದಲ್ಲಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.
1995ರ ಮಾರ್ಚ್ 12 ರಂದು ಇವರಿಬ್ಬರ ವಿವಾಹ ನೆರವೇರಿದ್ದು 29 ವರ್ಷಗಳ ಕಾಲ ಎಆರ್ ರೆಹಮಾನ್ ಹಾಗೂ ಸಾಯಿರಾ ಜೊತೆಯಾಗಿ ಜೀವನ ನಡೆಸಿದ್ದರು. ದಂಪತಿಗಳಿಗೆ ಖತೀಜಾ, ರಹೀಮಾ ಮತ್ತು ಅಮೀನ್ ಎನ್ನುವ ಮೂರು ಮಕ್ಕಳಿದ್ದಾರೆ.