
ಕಾರ್ಕಳ: ರಾಜ್ಯಸಭಾ ಸದಸ್ಯ ಕೆ ನಾರಾಯಣ್ ಅವರ ಸ್ಥಳೀಯ ಅಭಿವೃದ್ಧಿ ಯೋಜನೆಯಡಿ 2024-25 ನೇ ಸಾಲಿನ ಅನುದಾನದಲ್ಲಿ ಕಾರ್ಕಳ ತಾಲೂಕಿನ ಬೆಳ್ಮಣ್ ಸರಕಾರಿ ಪದವಿ ಪೂರ್ವ ಕಾಲೇಜು ಕೊಠಡಿ ನಿರ್ಮಾಣ ಕಾಮಗಾರಿಗೆ 20 ಲಕ್ಷ ರೂ. ಅನುದಾನವನ್ನು ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ರವರ ವಿಶೇಷ ಮುತುವರ್ಜಿಯಿಂದ, ಬೆಂಗಳೂರು ಜಿಲ್ಲಾಧಿಕಾರಿಯವರ ಆದೇಶದಂತೆ ಬಿಡುಗಡೆಮಾಡಿದ್ದು ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ತಿಳಿಸಲಾಗಿದೆ.
ಬೆಳ್ಮಾಣು ಪದವಿ ಪೂರ್ವ ಕಾಲೇಜಿನಲ್ಲಿ ಎಂಟರಿಂದ ಹನ್ನೆರಡನೇ ವರೆಗೆ ತರಗತಿಗಳಿದ್ದು, ಸಂಸದ ಕೆ ನಾರಾಯಣರವರ ಅನುಮೋದನೆಯ ಮೇರೆಗೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 20 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಬೆಂಗಳೂರು ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.







