
ಕಾರ್ಕಳ: ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ನೀರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಾಗೂ ಉದ್ಯಮಿ, ಬೆನಕ ಅಪಾರ್ಟ್ಮೆಂಟ್ ಮತ್ತು ದಿಯಾ ಪೆಟ್ರೋಲ್ ಪಂಪ್ ಮಾಲೀಕ, ರಾಮಕೃಷ್ಣ ಶೆಟ್ಟಿ (70) ಅವರು ಬುಧವಾರ ಬೆಳಿಗ್ಗೆ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನರಾದರು. ಅಲ್ಪಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ರಾಮಕೃಷ್ಣ ಶೆಟ್ಟಿ ಅವರು ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದು, ಮೈತ್ರಿ ಸೇವಾ ಸಂಘದ ಅಧ್ಯಕ್ಷರಾಗಿ ಮತ್ತು ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಗುರುತಿಸಿಕೊಂಡಿದ್ದರು.
ಅವರ ಪಾರ್ಥಿವ ಶರೀರದ ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಂದು ಮಧ್ಯಾಹ್ನ 1 ಗಂಟೆಯಿಂದ ಬೈಲೂರಿನ ಸ್ವಗೃಹದಲ್ಲಿ ಅವಕಾಶ ಕಲ್ಪಿಸಲಾಗಿದೆ. ಸಂಜೆ 5 ಗಂಟೆಗೆ ನೀರೆ ಬೊಟ್ಟ ಮನೆಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.











































