29.8 C
Udupi
Wednesday, March 18, 2026
spot_img
spot_img
HomeBlogಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪುವುದು ಕಾಂಗ್ರೆಸ್ ಗುರಿ : ಉದಯ ಶೆಟ್ಟಿ, ಮುನಿಯಾಲು

ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪುವುದು ಕಾಂಗ್ರೆಸ್ ಗುರಿ : ಉದಯ ಶೆಟ್ಟಿ, ಮುನಿಯಾಲು

ರಾಜ್ಯದಲ್ಲಿ ಪಂಚ ಗ್ಯಾರಂಟಿಯಿಂದ ಸಾಮಾನ್ಯ ಜನರ ಜೀವನ ಬದಲಾವಣೆ ಸಾಧ್ಯವಾಗಿದೆ. ಮಹಿಳಾ ಕೇಂದ್ರಿತ ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಹಕ್ಕುಗಳನ್ನು ರಕ್ಷಿಸಲು ಸಾಧ್ಯವಾಗಿದೆ ಎಂದು ಉದಯ್ ಶೆಟ್ಟಿ ಮುನಿಯಾಲು ಹೇಳಿದ್ದಾರೆ.


ಹೆಬ್ರಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ, ಶಿರ್ಲಾಲು ಗ್ರಾಮೀಣ ಕಾಂಗ್ರೆಸ್ ಆಶ್ರಯದಲ್ಲಿ ಉದಯ್ ಶೆಟ್ಟಿ ಮುನಿಯಾಲು ಅವರ ಗ್ರಾಮೋದಯ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರಕಾರ ಮತ್ತು ಜನರ ಕೊಂಡಿಯಾಗಿ ಕೆಲಸ ಮಾಡುವ ದೃಷ್ಟಿಯಿಂದ ಜನಪ್ರತಿನಿಧಿಗಳು ಶ್ರಮಿಸಬೇಕು ಎಂದರು.

ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೋಪಿನಾಥ್ ಭಟ್ ಮಾತನಾಡಿ, ಬೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆಗೆ ಕಾರ್ಯಕರ್ತರು ಶ್ರಮಿಸಬೇಕು. ಪಕ್ಷದ ಬೆಳವಣಿಗೆಗೆ ಕಾರ್ಯಕರ್ತರು ಜೊತೆಯಾಗಿ ಕೆಲಸ ಮಾಡಬೇಕು ಎಂದರು. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಮಾತನಾಡಿ, ಉದಯ್ ಕುಮಾರ್ ಶೆಟ್ಟಿ ಅವರು ಜನರಿಗಾಗಿ ಗ್ರಾಮಮಟ್ಟದಲ್ಲಿ ವಾಸ್ತವ್ಯ ಹೂಡುವ‌ ಮೂಲಕ ಜನರ ಸಮಸ್ಯೆಗಳಿಗೆ ಕಿವಿಯಾಗುತಿದ್ದಾರೆ. ತಮ್ಮ ಹಕ್ಕಿಗಾಗಿ ಜನಪ್ರತಿನಿಧಿಗಳ ಕಚೇರಿಗೆ ಅಲೆಯುವ ಸನ್ನಿವೇಶ ಬದಲಾಗಬೇಕು ಎಂದು ಹೇಳಿದರು.
ಅಜಿತ್ ಕಾರ್ಯಕ್ರಮ ನಿರೂಪಿಸಿ, ಪ್ರದೀಪ್ ಬೇಲಾಡಿ ಧನ್ಯವಾದ ಸಮರ್ಪಿಸಿದರು‌.

ಈ ಸಂದರ್ಭದಲ್ಲಿ ಶಿರ್ಲಾಲು ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅರುಣ್ ಪ್ರಸಾದ್, ಹೆಬ್ರಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ‌ಅಧ್ಯಕ್ಷರಾದ ಶಂಕರ ಶೇರಿಗಾರ, ರಂಜಿತ್, ಅಜೆಕಾರು ಗ್ರಾಮೀಣ ಅಧ್ಯಕ್ಷರಾದ ಸಂದೀಪ್ ಶೆಟ್ಟಿ , ಕೆ.ಎಮ್.ಎಪ್ ನಿರ್ದೇಶಕರಾದ ಸುಧಾಕರ್ ಶೆಟ್ಟಿ ಮುಡಾರು, ಜಯಕುಮಾರ್ ಜೈನ್, ಗಿರೀಶ್, ರಾಕೇಶ್, ಪ್ರಕಾಶ್ ಪೂಜಾರಿ, ನಾರಾಯಣ ನಾಯ್ಕ್ , ಸುನೀಲ್, ಶ್ರೀಮತಿ ಸುನೀತಾ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page