
ಬೈಂದೂರಿನಲ್ಲಿ ಜನವರಿ 5 ರಂದು ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರಿನ ಸೃಜನ ಕುಲಾಲ್ ಭಾಗವಹಿಸಿ ಕುಮಿಟೆಯಲ್ಲಿ (ಫೈಟಿಂಗ್) ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ. ಇವರಿಗೆ ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರಿನ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.



















