ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ವಿದ್ಯಾರ್ಥಿ ತಶ್ವಿನ್ ಗೌಡ, ದ್ವಿತೀಯ ಸ್ಥಾನ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸರಕಾರಿ ಪ್ರೌಢಶಾಲೆ, ಶಿವಪುರ, ಹೆಬ್ರಿಯಲ್ಲಿ ನಡೆದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್, ಕಾರ್ಕಳದ 6ನೇ ತರಗತಿ ವಿದ್ಯಾರ್ಥಿ ತಶ್ವಿನ್ ಗೌಡ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಪೋಷಕರಾದ ಚೈತ್ರೇಶ್ ಹಾಗೂ ಶ್ರುತಿ, ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿ, ಶಿಕ್ಷಕ ವೃಂದ ಅಭಿನಂದನೆಗಳನ್ನು ಸಲ್ಲಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಸಾಧನೆಗೈಯಲಿ ಎಂದು ಶುಭ ಹಾರೈಸಿದ್ದಾರೆ.






















































