
ಬೆಂಗಳೂರು : ರಾಜ್ಯ ಸರಕಾರದ ಅಧೀನದಲ್ಲಿರುವ ಸರಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಮಾಡಲಾಗುತ್ತಿದ್ದು, ಕೆಲವು ದಿನಗಳ ಹಿಂದೆ ಕಲಬುರ್ಗಿಯಲ್ಲಿ ನೀಡಲಾಗಿದ್ದ ಚಿಕ್ಕಿಯ ಗುಣಮಟ್ಟ ಕಳಪೆಯಾಗಿದ್ದು, ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀಡುವ ಅಂಶ ಪತ್ತೆಯಾಗಿದೆ.
ಪರಿಶೀಲನೆಯ ಸಂದರ್ಭದಲ್ಲಿ ಕೊಬ್ಬು ಮತ್ತು ಸಕ್ಕರೆ ಹೆಚ್ಚಿನ ಮಟ್ಟದಲ್ಲಿ ಇದೆ ಎನ್ನಲಾಗಿದ್ದು, ಇದೀಗ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಚಿಕ್ಕಿ ವಿತರಣೆ ನಿಲ್ಲಿಸಲು ಮಹತ್ವದ ಆದೇಶ ಹೊರಡಿಸಿದೆ.













