
ತುಮಕೂರು: ಝೀ ಕನ್ನಡ ವಾಹಿನಿಯ ಸರಿಗಮಪ ಸಿಂಗಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಪಾರ ಜನಮನ್ನಣೆ ಗಳಿಸಿದ್ದ ಅಂಧರಾಗಿದ್ದ ಮಂಜಮ್ಮ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಡಿವಿ ಹಳ್ಳಿ ಗ್ರಾಮದ ಮಂಜಮ್ಮ ಅನಾರೋಗ್ಯದಿಂದ ಬಳಲುತ್ತಿದ್ದು ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.





















