
ಬೆಳಗಾವಿ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ‘ಸಿಎಂ ನಿದ್ದೆರಾಮಯ್ಯ ಆಗಿದ್ದಾರೆ, 17 ತಿಂಗಳ ಅವಧಿಯಲ್ಲಿ 17 ಅವಾಂತರಗಳನ್ನು ಸರ್ಕಾರ ತೋರಿಸಿದೆ ಎಂದು ಆಕ್ರೋಷ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು 17 ತಿಂಗಳಾದರೂ ಸರ್ಕಾರ ಏನೂ ಅಭಿವೃದ್ಧಿ ಮಾಡಿಲ್ಲ. ಆದರೆ 17 ತಿಂಗಳಲ್ಲಿ 17 ಅವಾಂತರಗಳನ್ನು ಸರ್ಕಾರ ತೋರಿಸಿದೆ. ಸಿದ್ದರಾಮಯ್ಯ ಕಳೆದ ಬಾರಿಯ ಆಡಳಿತವನ್ನು ಕೊಡುತ್ತಿಲ್ಲ. ಈ ಬಾರಿ ಸಿದ್ದರಾಮಯ್ಯ ಅವರೇ ಮುಡಾದಲ್ಲಿ ಸಿಲುಕಿ ನರಳುತ್ತಿದ್ದಾರೆ. ಇದೀಗ ನಿದ್ದೆರಾಮಯ್ಯ ಆಗಿದ್ದಾರೆ. ಜೊತೆಗೆ ಸರ್ಕಾರವು ಕೂಡ ನಿದ್ದೆಯಲ್ಲಿದೆ. ಸಿಎಂಗೆ ಯಾವುದೇ ಇಲಾಖೆಗಳ ಮೇಲೆಯೂ ಹಿಡಿತ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.



















