
ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಕೆಇಎ ಸಿಹಿ ಸುದ್ದಿ ನೀಡಿದ್ದು ಅದೇನೆಂದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಸಂಚಾರ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಬಿ.ಕಾಂ, ಎಲ್‌ಎಲ್‌ಬಿ, ಬಿಇ/ ಬಿ.ಟೆಕ್, ಸ್ನಾತಕೋತ್ತರ ಪದವಿ, ಎಂಬಿಎ, ಸ್ನಾತಕೋತ್ತರ ಪದವಿ, ಎಂಎಸ್‌ಡಬ್ಲ್ಯೂ ಪೂರ್ಣಗೊಳಿಸಿರುವ ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 10ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ ಸಡಿಲಿಕೆ:
ಅಭ್ಯರ್ಥಿಯು 29-09-2025 ರಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ ವಯಸ್ಸಿನವರಾಗಿರಬೇಕು. ವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು SC, ST, Cat-I ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ನೀಡಲಾಗುತ್ತಿದೆ.
ಅರ್ಜಿ ಶುಲ್ಕ:
ಸಾಮಾನ್ಯ, ವರ್ಗ 2A, 2B, 3A, 3B ಅಭ್ಯರ್ಥಿಗಳು: 750 ರೂ.
ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳು: 500 ರೂ.
ಪಿಡಬ್ಲ್ಯೂಡಿ ಅಭ್ಯರ್ಥಿಗಳು: 250 ರೂ.
ಅರ್ಜಿ ಸಲ್ಲಿಸುವ ವಿಧಾನ:
- ಮೊದಲು KEA ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಓದಬೇಕು.
- ಕೆಇಎ ಸಹಾಯಕ ಸಂಚಾರ ವ್ಯವಸ್ಥಾಪಕರು ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು https://cetonline.karnataka.gov.in/KEARECRUITMENT_NWKRTC/FORMS/LOGIN.ASPX?fbclid=IwVERDUAOQtuhleHRuA2FlbQIxMABzcnRjBmFwcF9pZAwzNTA2ODU1MzE3MjgAAR6kVBazdRXfdRAOzCJsiwqf1_JdLBP1piLPCl_sq0RQikpppmwy3r5NcExfBg_aem_vM2x4yDcUmy5vqB_1zvF1A ಕ್ಲಿಕ್ ಮಾಡಿ.
- ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್‌ಲೋಡ್ ಮಾಡಬೇಕು.
- ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮಿಟ್ ಬಟನ್ ಕ್ಲಿಕ್ ಮಾಡಿದರೆ ಅರ್ಜಿ ಸಲ್ಲಿಕೆಯಾಗುತ್ತದೆ.



















