
ಕಾರ್ಕಳ: ಗುರುವಾರ ತಾಲೂಕಿನ ಸಾಣೂರು ಗ್ರಾಮದ ಮುದ್ದಣ್ಣನಗರ ಎಂಬಲ್ಲಿ ತಡರಾತ್ರಿ 1:30ರ ವೇಳೆಗೆ ವಾರಿಜಾ ಎಂಬವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸ್ವತ್ತುಗಳು ಹಾನಿಗೀಡದ ದುರ್ಘಟನೆ ನಡೆದಿದೆ.
ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಪೀಠೋಪಕರಣ, ವಾಷಿಂಗ್ ಮಿಷನ್, ಪಾತ್ರೆಗಳು ಹಾಗೂ ವಿದ್ಯುತ್ ಉಪಕರಣಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು ಸುಮಾರು 3 ಲಕ್ಷ ರೂ ನಷ್ಟ ಉಂಟಾಗಿದೆ. ಅದೃಷ್ಟವಶಾತ್ ದುರ್ಘಟನೆಯಲ್ಲಿ ಯಾರಿಗೂ ಗಾಯಗಳಾಗದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.



















