28.1 C
Udupi
Thursday, April 30, 2026
spot_img
spot_img
HomeBlogಸಾರ್ವಜನಿಕ ಉದ್ಯಾನಗಳಲ್ಲಿ ಸಾಕು ನಾಯಿ ಮಲ ಮಾಡಿದ್ರೆ ಮಾಲೀಕರಿಗೆ ದಂಡ!

ಸಾರ್ವಜನಿಕ ಉದ್ಯಾನಗಳಲ್ಲಿ ಸಾಕು ನಾಯಿ ಮಲ ಮಾಡಿದ್ರೆ ಮಾಲೀಕರಿಗೆ ದಂಡ!

ಬೆಂಗಳೂರು: ಹೈಕೋರ್ಟ್ ನಗರದಲ್ಲಿನ ಸಾರ್ವಜನಿಕ ಉದ್ಯಾನಗಳ ಸ್ವಚ್ಛತೆ ಕಾಯ್ದುಕೊಳ್ಳುವ ಉದ್ದೇಶದಿಂದ ಹಲವು ಮಾರ್ಗಸೂಚಿ ರಚಿಸಿದ್ದು ಉದ್ಯಾನಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸಲು ತೋಟಗಾರಿಕೆ ಇಲಾಖೆ ಮತ್ತು ಬಿಬಿಎಂಪಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಸರ್ಕಾರೇತರ ಸಂಘ ‘ಮೆಸೆರ್ಸ್‌ ಕಂಪ್ಯಾಷನ್ ಅನ್ಸಿಮಿಟೆಡ್ ಪ್ಲಸ್ ಅಕ್ಷನ್’ ನಗರದ ಸಾರ್ವಜನಿಕ ಉದ್ಯಾನಗಳಲ್ಲಿ ಸಾಕು ನಾಯಿಗಳಿಂದ ಉಂಟಾಗುತ್ತಿರುವ ಉಪದ್ರವ ಹಾಗೂ ನಾಯಿಗಳ ಮಲ ವಿಸರ್ಜನೆಗೆ ಕಡಿವಾಣ ಹಾಕಲು ಬಿಬಿಎಂಪಿ ಹಾಗೂ ಸರ್ಕಾರಕ್ಕೆ ಸೂಚಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಬೇಜವಾಬ್ದಾರಿಯುತವಾಗಿ ಸಾಕು ಪ್ರಾಣಿಗಳ ಪ್ರವೇಶಕ್ಕೆ ಅವಕಾಶ ನೀಡುತ್ತಿರುವುದರಿಂದ ಸಾರ್ವಜನಿಕ ಉದ್ಯಾನಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಲು ತೋಟಗಾರಿಕೆ ಇಲಾಖೆ, ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿ ವಿಫಲರಾಗಿದ್ದಾರೆ. ಈ ಬಗ್ಗೆ ಜನರಿಂದ 1288 ದೂರು ದಾಖಲಾಗಿವೆ. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿ ಉಪದ್ರವ ಉಂಟಾಗದಂತೆ ನಿಷೇಧಿಸುವ ಅವಕಾಶವಿದ್ದರೂ ಅವುಗಳನ್ನು ಜಾರಿ ಮಾಡುವ ಇಚ್ಛಾಶಕ್ತಿ ತೋರುತ್ತಿಲ್ಲ ಎಂಬ ಅರ್ಜಿದಾರರ ವಾದ ಪರಿಗಣಿಸಿದ ಹೈಕೋರ್ಟ್, ನಾಯಿಗಳ ವಿಕೃತ ನಡೆಯಿಂದ ಉದ್ಯಾನಕ್ಕೆ ಭೇಟಿ ನೀಡುವವರಿಗೆ ರಕ್ಷಣೆ ನೀಡಬೇಕಿದೆ. ಸಾರ್ವಜನಿಕ ಉದ್ಯಾನಗಳಲ್ಲಿ ಎಲ್ಲ ರೀತಿಯ ಸಚ್ಛತೆ ಕಾಯ್ದುಕೊಳ್ಳುವುದು ಕಡ್ಡಾಯ ಎಂದು ಆದೇಶ ಹೊರಡಿಸಿದೆ.

ಉದ್ಯಾನಗಳಲ್ಲಿ ಸ್ವಚ್ಛತೆ ಕಾಪಾಡಲು ಹೈಕೋರ್ಟ್‌ ಬಿಡುಗಡೆ ಮಾಡಿದ ಮಾರ್ಗಸೂಚಿಗಳು

  • ಸಾರ್ವಜನಿಕ ಉದ್ಯಾನಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವುದು ಸೇರಿ ಇತರೆ ಎಲ್ಲ ನಿಯಮ ಉಲ್ಲಂಘಿಸುವವರಿಗೆ ವಿಧಿಸುವ ದಂಡಕ್ಕಿಂತಲೂ, ನಾಯಿಯ ಮಲ ವಿಸರ್ಜಜನೆಗೆ ಕಾರಣರಾಗುವವರಿಗೆ ಹೆಚ್ಚಿನ ದಂಡ ವಿಧಿಸಬೇಕು.
  • ತೋಟಗಾರಿಕೆ ಇಲಾಖೆಯ ಒಬ್ಬ ಅಧಿಕಾರಿ, ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ಒಳಗೊಂಡ ಮೂವರು ಸದಸ್ಯರ ತಂಡ ರಚಿಸಬೇಕು. ಈ ತಂಡ ಕಾಲಕಾಲಕ್ಕೆ ನಗರದ ಎಲ್ಲ ಪ್ರಮುಖ ಉದ್ಯಾನಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸ್ವಚ್ಛತೆಗೆ ಅಗತ್ಯ, ಪರಿಣಾಮಕಾರಿ ಕ್ರಮ ರೂಪಿಸಿ ಜಾರಿಗೊಳಿಸಬೇಕು.
  • ಉದ್ಯಾನ ಪ್ರದೇಶ ಮತ್ತು ಆವರಣ ದಲ್ಲಿ ಉಗುಳುವುದು, ಕಸ ಎಸೆಯು ವುದು, ಸಾಕು ಪ್ರಾಣಿಗಳ ಮಲ ವಿಸರ್ಜನೆಗೆ ಅವಕಾಶ ಮಾಡುವುದನ್ನು ನಿಯಂತ್ರಿಸುವ, ಸ್ವಚ್ಛತೆ ಕಾಯ್ದು ಕೊಳ್ಳುವ, ಅದನ್ನು ಉಲ್ಲಂಘಿಸು ವವರಿಗೆ ದಂಡ ವಿಧಿಸುವ ಜವಾಬ್ದಾರಿ ಯನ್ನು ತಪ್ಪದೇ ನಿರ್ವಹಿಸಬೇಕು.
  • ಉದ್ಯಾನಗಳ ಕುರಿತ ಸಮರ್ಪಕ ನಿರ್ವಹಣೆ, ಜಾಗರೂಕತೆ ಕಾಯ್ದುಕೊಳ್ಳಲು ರಾಜ್ಯ ಸರ್ಕಾರ, ತೋಟಗಾರಿಕೆ ಇಲಾಖೆ ಮತ್ತು ಬಿಬಿಎಂಪಿ ಶಾಶ್ವತ ಕಾರ್ಯವಿಧಾನ ರೂಪಿಸಿ ಅಭಿವೃದ್ಧಿಪಡಿಸಬೇಕು.
  • ಬಿಬಿಎಂಪಿ ಅಧಿಕಾರಿಗಳು ನಗರದ ಉದ್ಯಾನಗಳಲ್ಲಿ ಕರ್ನಾಟಕ ಉದ್ಯಾನಗಳು, ಆಟದ ಮೈದಾನ ಮತ್ತು ಮುಕ್ತ ಸ್ಥಳಗಳ (ಸಂರಕ್ಷಣೆ ಮತ್ತು ನಿಯಂತ್ರಣ) ಕಾಯ್ದೆ-1985 ಹಾಗೂ ಘನತ್ಯಾಜ್ಯ ನಿರ್ವಹಣೆ ನಿಯಮಗಳು-2016 ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು.
  • ಉದ್ಯಾನಗಳಿಗೆ ಸಾಕು ನಾಯಿಗಳನ್ನು ಕರೆತರುವ ಮಾಲೀಕರು, ನಾಯಿ ವಿಸರ್ಜನೆ ಮಾಡುವ ತ್ಯಾಜ್ಯವನ್ನು ವಿಲೇವಾರಿ ಮಾಡಲು ಕೈ ಚೀಲ ತರುವ ಬಗ್ಗೆ ಜಾಗೃತಿ ಮೂಡಿಸಬೇಕು.
  • ಉದ್ಯಾನಗಳಲ್ಲಿ ಸ್ವಚ್ಛತೆ ಕಾಪಾಡಲು ಮತ್ತು ಸಮರ್ಪಕ ನಿರ್ವಹಣೆಗೆ ಸರ್ಕಾರ ಸೇರಿದಂತೆ ಎಲ್ಲ ಸಂಬಂಧಪಟ್ಟ ಪ್ರಾಧಿಕಾರಗಳು ಅಗತ್ಯ ಬಜೆಟ್ ಮೀಸಲಿಡಬೇಕು
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page