
ಶಿವಮೊಗ್ಗ: ಸಿಇಟಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ತಾವು ಧರಿಸಿದ್ದ ಜನಿವಾರ ತೆಗೆಸಿದ ಘಟನೆಯ ಕುರಿತು ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಯಾವ ಇಲಾಖೆಯು ಇಂತಹ ನಿರ್ದೇಶನ ಕೊಟ್ಟಿಲ್ಲ. ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಂಡು ಪರೀಕ್ಷೆಯಿಂದ ವಂಚಿತರಾದ ಮಕ್ಕಳಿಗೆ ಮರು ಪರೀಕ್ಷೆ ಕೊಡಿಸುವ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಜನಿವಾರ ತೆಗೆಯುವಂತಹ ಯಾವುದೇ ನಿಯಮ ಇಲ್ಲ. ಜಾತಿ ಧರ್ಮಗಳಿಗೆ ಗೌರವ ನೀಡಬೇಕಾಗುತ್ತದೆ. ಈ ಘಟನೆಗೆ ಕಾರಣರಾದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.



