
ದಾವಣಗೆರೆ: ನೋಣವಿನಕೆರೆಯ ಶ್ರೀ ಡಾ. ಕರಿವೃಷಭ ದೇಶೀಕೇಂದ್ರ ಶಿವಯೋಗಿಶ್ವರ ಸ್ವಾಮೀಜಿ ಗುರುವಾರ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಸಾಯಿಬಾಬಾ ದೇವಸ್ಥಾನದ ದಾಸೋಹ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದು ಈ ವೇಳೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ.
“ಶಿವಕುಮಾರ್ ಅವರು ಶ್ರೀಮಠದ ಭಕ್ತರಾಗಿದ್ದು ಶ್ರೀಮಠದ ಆಶೀರ್ವಾದ ಅವರಿಗಿದೆ. ಜೊತೆಗೆ ರೈತರು, ವ್ಯಾಪಾರಸ್ಥರು, ರಾಜಕೀಯ ಮುತ್ಸದಿಗಳು, ಬಡವರು ಸೇರಿದಂತೆ ಎಲ್ಲರೂ ಮುಖ್ಯಮಂತ್ರಿ ಆಗಲಿ ಎಂದು ಬಯಸುತ್ತಾರೆ. ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನಾನು ಭರವಸೆ ಕೊಡುತ್ತೇನೆ. ಈ ಅವಧಿಯಲ್ಲಿ ಮುಖ್ಯಮಂತ್ರಿ ಆಗಲಿದ್ದಾರೆ. ಸಮಯ ಮುಗಿಯುತ್ತಿದ್ದಂತೆ ಸಿದ್ದರಾಮಯ್ಯ ಅವರು ಮಾತು ಕೊಟ್ಟಂತೆ ತಮ್ಮ ಸ್ಥಾನ ಬಿಟ್ಟು ಕೊಡುತ್ತಾರೆ. ಅದಕ್ಕೆ ಹೈಕಮಾಂಡ್ ಸಹ ಒಪ್ಪಿಗೆ ನೀಡಲಿದೆ ಎಂದು ಹೇಳಿದ್ದಾರೆ” ಎಂದು ಭವಿಷ್ಯ ವಾಣಿ ನುಡಿದಿದ್ದಾರೆ.