
ಬೆಂಗಳೂರು: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ತನ್ನ 10ನೇ ತರಗತಿ ಫಲಿತಾಂಶವನ್ನು ಇಂದು (ಮೇ 13) ಪ್ರಕಟಿಸಿದೆ. ಈ ಬಾರಿ ಸಿಬಿಎಸ್‌ಇ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ 93.66 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಸಿಬಿಎಸ್‌ಇ ತಿಳಿಸಿದೆ. ಶೇ ಶೇ. 95 ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾದರೆ, ಶೇ. 92.63 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ.





















