
ಚೆನ್ನೈ: ಕಾಲಿವುಡ್ ನಟ ಸೂಪರ್ ಸ್ಟಾರ್ ರಜಿನಿಕಾಂತ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಸೋಮವಾರ ತಡರಾತ್ರಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಜಿನಿಕಾಂತ್ ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ವೈದ್ಯರ ಬಳಿ ಕರೆದುಕೊಂಡು ಹೋಗಲಾಗಿದೆ.
ಇಂದು ರಜಿನಿಕಾಂತ್ ಅವರಿಗೆ ಹೃದಯ ಸಂಬಂಧಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಸದ್ಯ ಅವರ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.








































