
ಬೆಂಗಳೂರು: ಸರ್ಕಾರವು ಸೆ.22 ರಿಂದ ಅ.07 ರವರೆಗೆ ಜಾತಿ ಜನಗಣತಿ ಸಮೀಕ್ಷೆ ನಡೆಸಲಾಗುವುದು ಎಂದು ಅಧಿಕೃತ ಆದೇಶ ಪ್ರಕಟಿಸಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ ನಡೆಸಲಾಗುತ್ತಿದ್ದು ಸಮೀಕ್ಷೆಗೆ ಸಿದ್ಧರಿರುವಂತೆ ರಾಜ್ಯದ ಜನತೆಗೆ ತಿಳಿಸಲಾಗಿದೆ. ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ರವರಿಗೆ ವಿಡಿಯೋ ಕಾನ್ಸರೆನ್ಸ್ ಮೂಲಕ ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ಹಾಗೂ ಸಮೀಕ್ಷಾದಾರರಿಗೆ ಅಗತ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಹಾಗೂ ಸಾರ್ವಜನಿಕರನ್ನು ಸಮೀಕ್ಷಾ ಕಾರ್ಯದಲ್ಲಿ ಪೂರ್ಣವಾಗಿ ಪಾಲ್ಗೊಳ್ಳಲು ಅರಿವು ಮೂಡಿಸಬೇಕೆಂದು ಸೂಚಿಸಲಾಗಿದೆ.








