
ಕಾರ್ಕಳ:: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆ ಜೊತೆಗೆ ತಮ್ಮನ್ನು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ವಿವಿಧ ಕ್ಲಬ್ ಗಳಿಗೆ ಚಾಲನೆ ನೀಡಲಾಯಿತು.ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ನಮ್ಮ ಶಾಲಾ ಹಳೆ ವಿದ್ಯಾರ್ಥಿ ಡಾಕ್ಟರ್ ರಜತ ಜೈನ್ ರವರು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಹಾಗೂ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಮಾಹಿತಿ ನೀಡಿದರು.ಶಾಲಾ ಅಧ್ಯಾಪಕರು ತಮ್ಮ ತಮ್ಮ ಕ್ಲಬ್ ಗಳ ಪರಿಚಯ ನೀಡಿ ಅದರ ಕಾರ್ಯ ವೈಖರಿಯ ಬಗ್ಗೆ ತಿಳಿಸಿದರು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಉಷಾ ಪಡಿವಾಳ್ ಸ್ವಾಗತಿಸಿದರು, ಸಹ ಶಿಕ್ಷಕಿ ಶ್ರೀಮತಿ ಅಮೃತ ಕಾರ್ಯಕ್ರಮ ನಿರೂಪಿಸಿದರು.









