
ಸ್ವಸ್ತಿಶ್ರೀ ನೇಮಿಸಾಗರ ವರ್ಣೀಜಿ ಪ್ರೌಢಶಾಲೆ ಹಿರಿಯಂಗಡಿ ಇಲ್ಲಿ ಕಾರ್ಕಳ ಪರಿಸರದ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಪರಿಸರ ಸಂರಕ್ಷಿಸುವ ಉದ್ದೇಶದಿಂದ ಪ್ರತಿ ವರ್ಷ ವಿಶ್ವ ಪರಿಸರ ದಿನಾಚರಣೆ ಜೂನ್ 5 ರಂದು ಆಚರಿಸಲಾಗುತ್ತದೆ. ನಮ್ಮ ಭೂಮಿ ನಮ್ಮ ಪರಿಸರ ಸಂರಕ್ಷಿತವಾಗಿದ್ದರೆ ನಾವು ಆರೋಗ್ಯವಂತರಾಗಿ ಬದುಕಬಹುದು ಪರಿಸರ ಸಂರಕ್ಷಣೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ಪ್ರತಿವರ್ಷದಂತೆ ಈ ವರ್ಷವೂ ನಮ್ಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಪರಿಸರ ಸಂರಕ್ಷಣೆ ಮತ್ತು ಜಾಗೃತಿಗಾಗಿ ಶಾಲಾ ಪರಿಸರದಲ್ಲಿ ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆಯ ಬಿತ್ತಿ ಪತ್ರವನ್ನು ಹಿಡಿದು ಜಾಥ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ಮುಖ್ಯೋಪಾಧ್ಯಾಯನಿ ಶ್ರೀಮತಿ ಉಷಾ ಪಡಿವಾಳ್ ಮಾಹಿತಿ ನೀಡಿದರು. ಈ ಜಾಥ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ,ಅಧ್ಯಾಪಕರು , ಸಿಬ್ಬಂದಿ ವರ್ಗದವರು ಭಾಗವಹಿಸಿದರು.
































