24.3 C
Udupi
Sunday, August 31, 2025
spot_img
spot_img
HomeBlogಸ್ವಾತಂತ್ರ್ಯ ಮತ್ತು ಮದುವೆ ಒಟ್ಟಿಗೇ ಇರಲಾರದು, ಆಯ್ಕೆ ನಿಮ್ಮದು: ದಂಪತಿಗಳಿಗೆ ಸುಪ್ರೀಂಕೋರ್ಟ್ ಕಿವಿಮಾತು

ಸ್ವಾತಂತ್ರ್ಯ ಮತ್ತು ಮದುವೆ ಒಟ್ಟಿಗೇ ಇರಲಾರದು, ಆಯ್ಕೆ ನಿಮ್ಮದು: ದಂಪತಿಗಳಿಗೆ ಸುಪ್ರೀಂಕೋರ್ಟ್ ಕಿವಿಮಾತು

ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರ ಪೀಠವು ದಂಪತಿಯ ನಡುವಿನ ಜಗಳ ಮತ್ತು ಅವರ ಇಬ್ಬರು ಅಪ್ರಾಪ್ತ ಮಕ್ಕಳ ಕುರಿತಾದ ಕೇಸಿನ ವಿಚಾರಣೆ ವೇಳೆ ಪತಿ ಅಥವಾ ಪತ್ನಿ ಇಬ್ಬರೂ ದಾಂಪತ್ಯದಲ್ಲಿ ಸಂಪೂರ್ಣ ಸ್ವಾತಂತ್ರ್ಯವನ್ನು ಪಡೆಯುವುದು ಅಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ವಿವಾಹದ ಅರ್ಥವೇ ಒಗ್ಗಟ್ಟು ಮತ್ತು ಸಹಕಾರವಾಗಿದೆ. ವಿವಾಹ ಸಂಬಂಧದಲ್ಲಿ ಪತಿ ಅಥವಾ ಪತ್ನಿ ಸಂಪೂರ್ಣವಾಗಿ ಸ್ವತಂತ್ರವಾಗಿ ಬದುಕಲು ಬಯಸುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ವಿವಾಹ ಮತ್ತು ಸ್ವಾತಂತ್ರ್ಯ ಒಟ್ಟಿಗೇ ಇರಲು ಸಾಧ್ಯವಾಗದೇ ಹೋಗಬಹುದು. ಆದ್ದರಿಂದ ಒಬ್ಬ ವ್ಯಕ್ತಿ ಸ್ವತಂತ್ರವಾಗಿರಲು ಬಯಸಿದರೆ, ಅಂಥವರು ಮದುವೆಯಾಗಬಾರದು ಎಂದು ಹೇಳಿದೆ.

ದಾಂಪತ್ಯದಲ್ಲಿ ಪತಿ ಮತ್ತು ಪತ್ನಿ ಭಾವನಾತ್ಮಕವಾಗಿ ಮತ್ತು ಸಾಮಾಜಿಕವಾಗಿ ಪರಸ್ಪರ ಅವಲಂಬಿತರಾಗಿರುವುದು ಸಹಜ. ಯಾವುದೇ ಪತಿ ಅಥವಾ ಪತ್ನಿ ನಾನು ನನ್ನ ಸಂಗಾತಿಯ ಮೇಲೆ ಅವಲಂಬಿತನಾಗಲು ಬಯಸುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಮದುವೆಯ ಅರ್ಥ ಪರಸ್ಪರ ಸಹಕಾರ ಮತ್ತು ಒಗ್ಗಟ್ಟು. ಆದ್ದರಿಂದ ಮದುವೆಯೂ ಬೇಕು, ಸ್ವಾತಂತ್ರ್ಯವೂ ಬೇಕು ಎಂದು ಹೇಳುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ:

ಪತಿ ಸಿಂಗಪುರದಲ್ಲಿ, ಪತ್ನಿ ಹೈದರಾಬಾದ್‌ನಲ್ಲಿ ವಾಸವಾಗಿದ್ದು ಪತಿಯ ವರ್ತನೆಯಿಂದಾಗಿ ಸಿಂಗಪುರಕ್ಕೆ ಹಿಂತಿರುಗುವುದು ಸಾಧ್ಯವಿಲ್ಲ ಎಂದು ಪತ್ನಿ ಆರೋಪಿಸಿದರು. ಯಾವುದೇ ಆರ್ಥಿಕ ಸಹಾಯವಿಲ್ಲದೆ ಮಕ್ಕಳನ್ನು ಬೆಳೆಸುತ್ತಿರುವುದಾಗಿ ಆಕೆ ಹೇಳಿದ್ದು ಮತ್ತೊಂದೆಡೆ, ಅವರಿಬ್ಬರಿಗೂ ಸಿಂಗಪುರದಲ್ಲಿ ಉತ್ತಮ ಉದ್ಯೋಗಗಳಿವೆ, ಆದರೆ ಪತ್ನಿ ಮಕ್ಕಳೊಂದಿಗೆ ಹಿಂತಿರುಗಲು ನಿರಾಕರಿಸುತ್ತಿದ್ದಾಳೆ ಎಂದು ಪತಿ ಹೇಳಿದ್ದಾರೆ. ವಿಚಾರಣೆಯ ಸಮಯದಲ್ಲಿ, ಪತ್ನಿ ಯಾರನ್ನೂ ಅವಲಂಬಿಸಲು ಬಯಸುವುದಿಲ್ಲ ಎಂದು ಹೇಳಿದ್ದು ಇದರ ಬಗ್ಗೆ ನ್ಯಾಯಮೂರ್ತಿ ನಾಗರತ್ನ ಅವರು, ನೀವು ಯಾರನ್ನೂ ಅವಲಂಬಿಸಲು ಬಯಸುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಹಾಗಿದ್ದಲ್ಲಿ ನೀವು ಏಕೆ ಮದುವೆಯಾದಿರಿ? ಪತ್ನಿ ಯಾವಾಗಲೂ ತನ್ನ ಗಂಡನ ಮೇಲೆ ಭಾವನಾತ್ಮಕವಾಗಿ ಅವಲಂಬಿತರಾಗಿರುತ್ತಾಳೆ ಎಂದು ಹೇಳಿದ ನ್ಯಾಯ ಪೀಠವು ಇದೇ ವೇಳೆ ದಂಪತಿಗೆ ಹೊಂದಾಣಿಕೆಯ ಪಾಠವನ್ನು ಮಾಡಿದೆ.

ದಂಪತಿ ತಮ್ಮ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಂಡು ಮಾತುಕತೆಯ ಮೂಲಕ ಪರಿಹಾರವನ್ನು ಕಂಡುಕೊಳ್ಳುವಂತೆ ನ್ಯಾಯಮೂರ್ತಿಗಳು ತಿಳಿಸಿದ್ದು ನ್ಯಾಯಾಲಯವು ಪತಿಗೆ ಅವರ ಜನ್ಮದಿನದಂದು ಮಕ್ಕಳೊಂದಿಗೆ ಸಮಯ ಕಳೆಯಲು ಮತ್ತು ವಾರಾಂತ್ಯದಲ್ಲಿ ಮಧ್ಯಂತರ ಕಸ್ಟಡಿಯನ್ನು ಪಡೆಯಲು ಆದೇಶಿಸಿ ವಿಚಾರಣೆಯನ್ನು ಮುಂದೂಡಿತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page