
ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಭಾಗಗಳಿಗೆ ಅರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಹಗುರ ಮಳೆ ಬೀಳಲಿದೆ ಎಂದು ಇಲಾಖೆ ತಿಳಿಸಿದೆ.













