
ಕರಾವಳಿ ಜಿಲ್ಲೆಗಳಿಗೆ ಮತ್ತೆ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗಲಿದ್ದು ಮತ್ತು ನಿರಂತರ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮತ್ತು ಅತಿ ಭಾರೀ ಮಳೆ ಆಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.













