
ರಾಜ್ಯದಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದ್ದು, ದಕ್ಷಿಣ ಕನ್ನಡ, ಉಡುಪಿ ,ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದು ಎರಡು ಸ್ಥಳಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್













