
ಬಂಗಾಳಕೊಲಿಯಲ್ಲಿ ವಾಯುಭಾರ ಕುಸಿದ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವಂಬರ್ 29 ರಿಂದ ಡಿಸೆಂಬರ್ 3ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಸೇರಿದಂತೆ ಶಿವಮೊಗ್ಗ ಮಂಡ್ಯ ಮೈಸೂರು ಚಿಕ್ಕಬಳ್ಳಾಪುರ ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23° ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33°c ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23° ಸೆಲ್ಸಿಯಸ್



















