
ಬಂಗಾಳಕೊಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜನವರಿ 13ರಂದು ಕೋಲಾರ, ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಕರಾವಳಿ , ಉತ್ತರ ಒಳನಾಡು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್



















