
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ.ಇಂದು ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ,ದಕ್ಷಿಣ ಕನ್ನಡ ,ಉತ್ತರ ಕನ್ನಡ ಸೇರಿದಂತೆ ಕರಾವಳಿ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ತಾಪಮಾನ ಏರಿಕೆಯಾಗಲಿದ್ದು ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್






















































