
ಬೆಂಗಳೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು ಹಾಸನ, ಕೋಲಾರ ,ಮಂಡ್ಯ ,ಮೈಸೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆ ಆಗಲಿದ್ದು ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ರಾಜ್ಯದ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ.