
ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಪೂರ್ವ ಮುಂಗಾರುಮಳೆ ಅಬ್ಬರಿಸುತ್ತಿದೆ. ಇಂದಿನಿಂದ (ಮೇ 23) ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳೀಯ ಮುನ್ಸೂಚನೆ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ಕೇಂದ್ರದ ಮುಖ್ಯಸ್ಥರಾದ ಡಾ.ರಾಜವೇಲ್ ಮಾಣಿಕ್ಕಂ ತಿಳಿಸಿದ್ದಾರೆ.ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ.