
ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು ಮುಂದಿನ ಮೂರು ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ,ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ ,ಕೊಡಗು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ ,ಧಾರವಾಡ, ಗದಗ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಂಗಳೂರು, ಚಾಮರಾಜನಗರ ,ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್



















