
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜುಲೈ ಮೂರರ ನಂತರ ರಾಜ್ಯದಲ್ಲಿ ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ ,ಉತ್ತರ ಕನ್ನಡ, ಚಿಕ್ಕಮಗಳೂರು ,ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್









