
ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ ,ವಿಜಯಪುರ, ಬಾಗಲಕೋಟೆ ,ಮಂಡ್ಯ ,ಮೈಸೂರು, ರಾಮನಗರ ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 16ರವರೆಗೆ ಭಾರಿ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್