
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಸೇರಿದಂತೆ ಉಡುಪಿ, ದಕ್ಷಿಣ ಕನ್ನಡ ,ಬೆಳಗಾವಿ ,ವಿಜಯಪುರ, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆ ಯಾಗಲಿದೆ.
ಉಡುಪಿ ಜಿಲ್ಲೆಯಲ್ಲಿ ಇಂದು ಭಾರಿ ಮಳೆಯ ಕಾರಣ ಅಂಗನವಾಡಿ ,ಪ್ರಾಥಮಿಕ ಮತ್ತು ಪ್ರೌಢಶಾಲೆ ಪದವಿಪೂರ್ವ ಕಾಲೇಜು , ಐಟಿಐ ಗಳಿಗೆ ರಜೆ ಘೋಷಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್