
ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ ,ದಕ್ಷಿಣ ಕನ್ನಡ ,ಬೆಳಗಾವಿ ವಿಜಯಪುರ, ಹಾಸನ, ಶಿವಮೊಗ್ಗ ,ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಕರಾವಳಿ ಭಾಗಗಳಲ್ಲಿ ವೇಗವಾದ ಗಾಳಿ ಬೀಸಲಿದ್ದು ,ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 26° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್



















